ತಲೈವಾ ರಜಿನಿಕಾಂತ್ ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ…

92
firstsuddi

ನವದೆಹಲಿ : 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಭಾಜನರಾಗಿದ್ದಾರೆ. 2020ನೇ ಸಾಲಿನ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ರಜಿನಿಕಾಂತ್ ಅವರಿಗೆ ನೀಡಲಾಗುತ್ತಿದೆ. ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನನಗೆ ಪ್ರದಾನ ಮಾಡಿದ ಭಾರತ ಸರ್ಕಾರಕ್ಕೆ, ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ, ಸಚಿವ ಪ್ರಕಾಶ್ ಜಾವಡೇಕರ್ ಮತ್ತು ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಎಂದು ರಜಿನಿಕಾಂತ್ ಅವರು ಹೇಳಿದ್ದಾರೆ.

ರಜನಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಯಾಗುತ್ತಿದ್ದಂತೆ ಪ್ರಧಾನಿ ಮೋದಿ, ಬಿ.ಎಸ್.ಯಡಿಯೂರಪ್ಪ, ಸ್ಟಾಲಿನ್, , ಕಮಲ್ ಹಾಸನ್ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.