ಹಳಿ ತಪ್ಪಿದ ರೈಲು – 36 ಮಂದಿ ಪ್ರಯಣಿಕರ ದುರ್ಮರಣ…

99
firstsuddi

ತೈಪೆ (ತೈವಾನ್): ರೈಲು ಹಳಿ ತಪ್ಪಿದ ಪರಿಣಾಮ ರೈಲಿನಲ್ಲಿದ್ದ 36 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಪೂರ್ವ ತೈವಾನ್ ನಲ್ಲಿ ಸಂಭವಿಸಿದೆ.

ಇಂದು ಬೆಳಗ್ಗೆ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಅಪಘಾತದಲ್ಲಿ 72 ಮಂದಿ ಗಾಯಗೊಂಡಿದ್ದಾರೆ ಎಂದು ತೈವಾನ್ ಸಾರಿಗೆ ಇಲಾಖೆ ತಿಳಿಸಿದೆ. ರೈಲಿನ 5ಕ್ಕೂ ಹೆಚ್ಚು ಬೋಗಿಗಳು ಜಖಂ ಆಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.