ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 89,129 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,23,92,260ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 714 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,64,110ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,23,92,260 ಮಂದಿ ಸೋಂಕಿತರ ಪೈಕಿ ಈವರೆಗೆ 1,15,69,241 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










