ಬರ್ತಡೇ ಸಂಭ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ..!

119
firstsuddi

ಬೆಂಗಳೂರು : ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಇಂದು 25 ನೇ ವರ್ಷದ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಸಿನಿಮಾದ ಅನೇಕ ನಟ-ನಟಿಯರು, ಆಪ್ತರು, ಸ್ನೇಹಿತರು, ಕೋಟ್ಯಾಂತರ ಅಭಿಮಾನಿಗಳ ಶುಭಾಶಯದ ಮಹಾಪೂರವೇ ಹರಿದು ಬರುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಕಾಮನ್ ಡಿಪಿ ಶೇರ್ ಮಾಡಿಕೊಳ್ಳುವ ಮೂಲಕ ವಿಶ್ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಕನ್ನಡಕ್ಕಿಂತಲೂ ಹೆಚ್ಚಾಗಿ ಪರಭಾಷೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ರಶ್ಮಿಕಾ ಅವರ ಜನ್ಮದಿನದ ಪ್ರಯುಕ್ತ ಕಾಮನ್ ಡಿಪಿ ಬಿಡುಗಡೆ ಮಾಡಲಾಗಿದೆ. ವಿಜಯ್ ದೇವರಕೊಂಡ ಸಹೋದರ ಆನಂದ್ ದೇವರಕೊಂಡ ಅವರು ಸೇರಿದಂತೆ ಹಲವರು ಕಾಮನ್ ಡಿಪಿಯನ್ನು ಹಂಚಿಕೊಂಡಿದ್ದಾರೆ. ಕಿರಿಕ್ ಪಾರ್ಟಿಯ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣನವರು ಈಗ ಬಾಲಿವುಡ್ ನಲ್ಲೂ ಸುದ್ಧಿಯಾಗಿದ್ದಾರೆ.