ಹುತಾತ್ಮ ಯೋಧರ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ ಅಮಿತ್ ಶಾ.

108
firstsuddi

ಛತ್ತೀಸ್ ಗಢ : ಕೇಂದ್ರ ಸಚಿವ ಅಮಿತ್ ಶಾ ಅವರು ನಕ್ಸಲ್ ದಾಳಿ ನಡೆದ ಬಸ್ತಾರ್ ಜಿಲ್ಲೆಯ ಜಗದಲ್ಪುರ ಸ್ಥಳಕ್ಕೆ ಭೇಟಿ ನೀಡಿದ್ದು, ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಅವರು ಮಾಲಾರ್ಪಣೆ ಮಾಡಿ ಅಂತಿಮ ನಮನ ಸಲ್ಲಿಸಿದರು.

ನಿನ್ನೆ ಬಸ್ತಾರ್ ಪ್ರದೇಶದಲ್ಲಿ ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ 22 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು.  ಬಸ್ತಾರ್ ಜಿಲ್ಲೆಯ ಜಗದಲ್ಪುರದಲ್ಲಿ ಇಂದು ಹುತಾತ್ಮರ ಪಾರ್ಥಿವ ಶರೀರಗಳನ್ನು ಇರಿಸಲಾಗಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ಸಲ್ಲಿಸಲಾಯಿತು.