ಮಾತು ಬಾರದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕರು…

116
firstsuddi

ಮಂಡ್ಯ : ಮಾತು ಬಾರದ ಮಹಿಳೆಯ ಮೇಲೆ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹೊನಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಏಪ್ರಿಲ್ 1 ರಂದು ಹೊನಗನಹಳ್ಳಿ ಗ್ರಾಮದ ಮಾತು ಬಾರದ 48 ವರ್ಷದ ಮಹಿಳೆ ಹೊಲದಲ್ಲಿ ಜಾನುವಾರು ಮೇಯಿಸಲು ಹೋಗಿದ್ದಾರೆ. ಈ ವೇಳೆ ಅಲ್ಲಿಗೆ ಬಂದ ಅದೇ ಗ್ರಾಮದ ಮೂವರು ಯುವಕರು ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಗಳಾದ ಶೇಖರ್, ಪ್ರಸನ್ನ, ಕವನ್ ಎಂಬುವವರನ್ನು ಪಾಂಡವಪುರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.