ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,15,736 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,28,01,785ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 630 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,66,177ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,28,01,785 ಮಂದಿ ಸೋಂಕಿತರ ಪೈಕಿ ಈವರೆಗೆ 1,17,92,135 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










