ಕೋವಿಡ್-19ನ ಎರಡನೇ ಡೋಸ್ ಲಸಿಕೆ ಪಡೆದ ಪ್ರಧಾನಿ ಮೋದಿ.

109
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಇಂದು ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೋದಿಯವರು, ಏಮ್ಸ್ ನಲ್ಲಿ ಇಂದು ಕೋವಿಡ್ ಎರಡನೇ ಡೋಸ್ ಲಸಿಕೆ ಪಡೆದುಕೊಂಡೆ. ವೈರಸ್ ವಿರುದ್ಧ ಹೋರಾಡಲು ನಮ್ಮಲ್ಲಿ ಇರುವ ಕೆಲವು ವಿಧಾನಗಳಲ್ಲಿ ಲಸಿಕೆ ಕೂಡ ಒಂದು, ಹೀಗಾಗಿ ಯಾರೆಲ್ಲಾ ಲಸಿಕೆ ಪಡೆದುಕೊಳ್ಳಲು ಅರ್ಹರಾಗಿದ್ದೀರಾ ಅವರೆಲ್ಲಾ ಶೀಘ್ರಗತಿಯಲ್ಲಿ ಲಸಿಕೆ ಪಡೆದುಕೊಳ್ಳಿ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಾರ್ಚ್ 1ರಂದು ಪ್ರಧಾನಿಯವರು ಮೊದಲ ಡೋಸ್ ಪಡೆದುಕೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿ ಮೋದಿಯವರು, ನಾನು ಏಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದೇನೆ. ಭಾರತ ದೇಶವನ್ನು ಕೊರೊನಾ ಮುಕ್ತ ದೇಶವನ್ನಾಗಿ ಮಾಡಲು ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಮೋದಿಯವರು ಮನವಿ ಮಾಡಿದ್ದರು.