ಮಂಡ್ಯ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವು…

116
firstsuddi

ಮಂಡ್ಯ : ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ಚಂದನ್(11), ಕಾರ್ತಿಕ್(10) ಹಾಗೂ ರೀತೇಶ್(8) ಎಂದು ಗುರುತಿಸಲಾಗಿದೆ. ಇಂದು ಈ ಘಟನೆ ಸಂಭವಿಸಿದ್ದು, ಮಕ್ಕಳಿಗೆ ಶಾಲೆಗೆ ರಜೆ ಇದ್ದ ಹಿನ್ನೆಲೆ ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ಹೋದಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಈ ಬಗ್ಗೆ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.