ಸಾರಿಗೆ ನೌಕರ ನೇಣಿಗೆ ಶರಣು!

121
firstsuddi

ಬೆಳಗಾವಿ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರನೋರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿವಕುಮಾರ್ ನೀಲಗಾರ (40) ಆತ್ಮಹತ್ಯೆ ಮಾಡಿಕೊಂಡ ಸಾರಿಗೆ ನೌಕರ. ಜಿಲ್ಲೆಯ ಸವದತ್ತಿಯಲ್ಲಿರುವ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕರ್ತವ್ಯಕ್ಕೆ ಹಾಜರಾಗುವಂತೆ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಜಿಲ್ಲೆಯ ಸವದತ್ತಿ ಘಟಕದ ಬಸ್ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು.

ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಂದು ಸಿದ್ದರಾಮಯ್ಯನವರು ಸವದತ್ತಿಗೆ ಆಗಮಿಸುತ್ತಿದ್ದಾರೆ. ಈ ವೇಳೆ ಮುಷ್ಕರ ನಿರತ ಸಾರಿಗೆ ನೌಕರರು ಮಾಜಿ ಸಿಎಂ ಸಿದ್ದರಾಮಯ್ಯರವರನ್ನು ಭೇಟಿ ಮಾಡಲಿದ್ದಾರೆ.