ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು!

174
firstsuddi

ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಮನೆ ಮುಂದೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ  ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮೃತ ಮಹಿಳೆಯನ್ನು ಶ್ರೀದೇವಿ ಕಮ್ಮಾರ ಎಂದು ಗುರುತಿಸಲಾಗಿದೆ. ಮನೆ ಬಿದ್ದ ಪರಿಹಾರಕ್ಕೆ ಅಲೆದಾಡಿದ ಮಹಿಳೆ ಕೊನೆಗೆ ಮನನೊಂದು ಏಪ್ರಿಲ್ 06ರಂದು ಸಚಿವರ ಮಯೂರಿ ಎಸ್ಟೇಟ್ ನಲ್ಲಿರುವ ಮನೆಯ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬಳಿಕ ಅವರನ್ನು ಜಿಲ್ಲೆಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ.

ಘಟನೆ ಸಂಬಂಧ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.