ನಾಳೆಯಿಂದ ಕೊರೊನಾ ಕರ್ಫ್ಯೂ ಜಾರಿ – ಮಾರ್ಗಸೂಚಿ ಬಿಡುಗಡೆ…

159
firstsuddi

ಬೆಂಗಳೂರು : ರಾಜ್ಯಾದ್ಯಂತ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದ ಎಂಟು ನಗರಗಳಾದ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ್, ಬೀದರ್, ಕಲಬುರಗಿ ಮತ್ತು ತುಮಕೂರು ನಗರಗಳಲ್ಲಿ ಏಪ್ರಿಲ್ 10 ರಿಂದ 20 ರ ವರೆಗೆ ಕರೊನ  ಕರ್ಪೂ ಅನ್ನು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಗೊಳಿಸಲಾಗಿದ್ದು ಅದರ ಮಾರ್ಗಸೂಚಿ ಪ್ರಕಟಗೊಂಡಿದೆ.

ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವಂತಹ ಎಲ್ಲಾ ಕಾರ್ಖಾನೆಗಳು / ಕಂಪನಿಗಳು / ಸಂಸ್ಥೆಗಳು ಯಥಾರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಆದರೆ, ಸಂಬಂಧಿಸಿದ ಕಾರ್ಮಿಕರು , ನೌಕರರು ಕೊರೊನಾ ಕರ್ಪ್ಯೂ ಅವಧಿಗೆ ಮುನ್ನವೆ ಕರ್ತವ್ಯದಲ್ಲಿ ಹಾಜರಿರತಕ್ಕದ್ದು.

• ವೈದ್ಯಕೀಯ ಸೇವೆಗಳನ್ನು ಮತ್ತು ತುರ್ತು ಚಟುವಟಿಕೆಗೆ ಮಾತ್ರ ಅನುಮತಿಸಿದ್ದು, ಇನ್ನುಳಿದಂತೆ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಿದೆ.

• ಅತ್ಯವಶ್ಯಕ ಸೇವೆಗಳನ್ನು ಒದಗಿಸುವಂತಹ ವಾಹನಗಳು / ಸರಕು ಸಾಗಾಣಿಕೆ ವಾಹನಗಳು / ಹೋಮ್ ಡೆಲಿವರಿ / ಇ-ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿಸಿದೆ.

• ರಾತ್ರಿ ವೇಳೆಯಲ್ಲಿನ ಬಸ್ಸು, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅನುಮತಿಸಿದೆ. ಪ್ರಯಾಣಿಕರು ಮನೆಯಿಂದ ನಿಲ್ಯಾಣಗಳಿಗೆ ಮತ್ತು ನಿಲ್ಯಾಣಗಳಿಂದ ಮನೆಗೆ ಅಧಿಕೃತ ಟಿಕೆಟ್ಗಳ ಆಧಾರದ ಮೇಲೆ ಆಟೋ, ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿಸಿದೆ.

ಈ ಆದೇಶವನ್ನು ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಆಯುಕ್ತರು, ಬೆಂಗಳೂರು ನಗರ, ಮೈಸೂರು, ಕಲಬುರಗಿ, ಮಂಗಳೂರು ಮತ್ತು ಸಂಬಂಧಿಸಿದ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೊಳಿಸತಕ್ಕದ್ದು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.