ದೇಶದಲ್ಲಿ 1,45,384 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆ…

103
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,45,384 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,32,05,926ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 794 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,68,436ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,32,05,926 ಮಂದಿ ಸೋಂಕಿತರ ಪೈಕಿ ಈವರೆಗೆ 1,19,90,859 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.