ಚಿಕ್ಕಮಗಳೂರು : ರಸಗೊಬ್ಬರದ ಬೆಲೆ ಹೆಚ್ಚಳ ಆದೇಶವನ್ನು ಹಿಂಪಡೆಯುವಂತೆ ಜಿಲ್ಲಾ ಕಿಸಾನ್ ಕಾಂಗ್ರೇಸ್ ಮತ್ತು ಬ್ಲಾಕ್ ಕಾಂಗ್ರೇಸ್ ನಿಂದ ಒತ್ತಾಯ…

133
firstsuddi

ಚಿಕ್ಕಮಗಳೂರು : ರಸಗೊಬ್ಬರದ ಬೆಲೆ ಹೆಚ್ಚಳದ ಆದೇಶವನ್ನು ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಸೂಚಿಸುವಂತೆ ಜಿಲ್ಲಾ ಕಿಸಾನ್ ಕಾಂಗ್ರೇಸ್ ಮತ್ತು ಬ್ಲಾಕ್ ಕಾಂಗ್ರೇಸ್ ಪದಾಧಿಕಾರಿಗಳು ರಾಷ್ಟ್ರಪತಿ ಅವರನ್ನು ಒತ್ತಾಯಿಸಿದ್ದಾರೆ.

ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರನ್ನು ಇಂದು ಭೇಟಿ ಮಾಡಿದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿ ರಸಗೊಬ್ಬರದ ಬೆಲೆ ಹೆಚ್ಚಳದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದರು.

ಅತಿವೃಷ್ಠಿ, ಅನಾವೃಷ್ಠಿ, ಬೆಲೆ ಕುಸಿತ, ಬೆಳೆ ನಷ್ಟದಿಂದ ದೇಶದ ರೈತರು ಈಗಾಗಲೇ ಆರ್ಥಿಕ ಸಂಕಷ್ಟಕ್ಕೀಡಾಗಿ ಜರ್ಝರಿತರಾಗಿದ್ದಾರೆ, ಇದರ ನಡುವೆಯೇ ರಸಗೊಬ್ಬರದ ಬೆಲೆಯನ್ನು ಅವೈಜ್ಞಾನಿಕವಾಗಿ ಹೆಚ್ಚಿಸಿರುವುದು ಅವರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದರು.

ರಸಗೊಬ್ಬರದ ಬೆಲೆಯನ್ನು ಇಳಿಸುವಂತೆ ಕಂಪನಿಗಳಿಗೆ ಕೇಂದ್ರ ಸರ್ಕಾರ ಬರೀ ಬಾಯಿ ಮಾತಿನಲ್ಲಿ ಸೂಚನೆ ನೀಡಿದೆ, ಅದರಿಂದ ಯಾವ ಪ್ರಯೋಜನವೂ ಆಗಿಲ್ಲ, ರಸಗೊಬ್ಬರದ ಬೆಲೆ ಇನ್ನೂ ಇಳಿದಿಲ್ಲ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಿಗೆ ಮತ್ತು ರೈತರು ಬಳಸುವ ಪಂಪ್ ಸೆಟ್‍ಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಅಗ್ರಹಿಸಿದರು.

ಕಿಸಾನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಅರೇನಳ್ಳಿ ಪ್ರಕಾಶ್, ಉಪಾಧ್ಯಕ್ಷ ಬಲರಾಮ್, ಕಾರ್ಯದರ್ಶಿ ಸಿ.ಸಿ.ಮಧು, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮಂಜೇಗೌಡ, ಜಿ.ಪಂ. ಮಾಜಿ ಅಧ್ಯಕ್ಷ ಹೆಚ್.ಎಂ.ಸತೀಶ್, ನಾಗಭೂಷಣ್ ಹಾಜರಿದ್ದರು.