ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ…

119
firstsuddi

ಬೆಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂರ್ತಿ(40) ಚಡ್ಡಾ ಕೃಷ್ಣನ್ (22) ಬಂಧಿತ ಆರೋಪಿಗಳು. ಬಂಧಿತರಿಂದ 84.60 ಲಕ್ಷ ಮೌಲ್ಯದ 141 ಕೆ.ಜಿ ಗಾಂಜಾ, 4 ಸಾವಿರ ನಗದು, ಹಾಗೂ ಈಚರ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.