ದೇಶದಲ್ಲಿ 2,00,739 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,40,74,564ಕ್ಕೆ ಏರಿಕೆ…

116
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,00,739 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,038 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,73,123ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,40,74,564 ಮಂದಿ ಸೋಂಕಿತರ ಪೈಕಿ ಈವರೆಗೆ 1,24,29,564 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.