ಬೆಂಗಳೂರು : ಹಿರಿಯ ನಟ ಹಾಗೂ ನಿರ್ದೇಶಕ ದ್ವಾರಕೀಶ್ ಅವರ ಪತ್ನಿ ಅಂಬುಜಾ ಅವರು ಇಂದು ನಿಧನರಾಗಿದ್ದಾರೆ.
ಅಂಬುಜಾ ಅವರಿಗೆ 80 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಂಬುಜಾ ಅವರು ಇಂದು ಮಧ್ಯಾಹ್ನ ಹೆಚ್ಎಸ್ಆರ್ ಲೇಔಟ್ ನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಎಚ್ ಎಸ್ ಅರ್ ಲೇಔಟ್ ನ ಅಪಾರ್ಟ್ಮೆಂಟ್ ನಲ್ಲಿ ಸದ್ಯ ಅಂಬುಜ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.










