ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್…

116
First Suddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್. ಡಿ.ಕುಮಾರಸ್ವಾಮಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್. ಡಿ.ಕುಮಾರಸ್ವಾಮಿಯವರು, “ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.” ಎಂದು ಮನವಿ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಮಾಜಿ ಪ್ರಧಾನಿಗಳಾದ ದೇವೇಗೌಡರು ಮತ್ತು ಅವರ ಶ್ರೀಮತಿ ಚನ್ನಮ್ಮ ಅವರಿಗೂ ಸೋಂಕು ತಗುಲಿತ್ತು. ಇದೀಗ ಕುಮಾರಸ್ವಾಮಿ ಅವರಿಗೂ ಸೋಂಕು ತಗುಲಿದೆ.