ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,73,810 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,50,61,919ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 1,619 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,78,769ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,50,61,919 ಮಂದಿ ಸೋಂಕಿತರ ಪೈಕಿ ಈವರೆಗೆ 1,29,53,821 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










