ಕೋವಿಡ್ ನಿಂದ ರಮೇಶ್ ಜಾರಕಿಹೊಳಿ ಗುಣಮುಖ ; ನಾಳೆ ವಿಚಾರಣೆಗೆ ಹಾಜರಾಗ್ತಾರಾ?

136
Firstsuddi

ಬೆಳಗಾವಿ : ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ ಹದಿನೈದು ದಿನಗಳಿಂದ ಹೋಂ ಕ್ವಾರಂಟೈನ್ ಆಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

ಏಪ್ರಿಲ್.1 ರಂದು ರಮೇಶ್ ಜಾರಕಿಹೊಳಿಯವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆ ಗೋಕಾಕಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಹೋಂ ಕ್ವಾರಂಟೈನ್ ಆಗಿದ್ದರು. ಮೂರು ಸಲ ಕೊರೊನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ನೆಗೆಟಿವ್ ಬಂದಿದೆ.

ರಮೇಶ್ ಜಾರಕಿಹೊಳಿಯವರು ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದರೂ ನಿಶಕ್ತಿ ಹೆಚ್ಚಾಗಿರುವ ಕಾರಣ ಮತ್ತಷ್ಟು ದಿನ ವಿಶ್ರಾಂತಿ ಪಡೆಯುವಂತೆ ಗೋಕಾಕ ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ರವೀಂದ್ರ ಅಂಟೀನ್ ಅವರು ಸಲಹೆ ನೀಡಿರುವ ಹಿನ್ನಲೆ ನಾಳೆ ಎಸ್ಐಟಿ ಮುಂದೆ ರಮೇಶ್ ಜಾರಕಿಹೊಳಿ ಅವರು ರಮೇಶ್ ಜಾರಕಿಹೊಳಿ ಅವರು ಹಾಜರಾಗ್ತಾರಾ ಎಂದು ಕಾದು ನೋಡಬೇಕಾಗಿದೆ.

ಕೆಲ ದಿನಗಳ ಹಿಂದೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 20ರಂದು ಸಂಜೆ 4ಕ್ಕೆ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ರಮೇಶ್ ಜಾರಕಿಹೊಳಿ ಅವರಿಗೆ ನೋಟಿಸ್ ನೀಡಿತ್ತು.