ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ; 13 ಕೊರೊನಾ ರೋಗಿಗಳು ಸಾವು…

142
firstsuddi

ಮಹಾರಾಷ್ಟ್ರ: ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ ಸಂಭವಿಸಿ 13 ರೋಗಿಗಳು ಸಜೀವ ದಹನವಾಗಿರುವ ಘಟನೆ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

ಇಂದು ಬೆಳಗಿನ ಜಾವ ಈ ಘಟನೆ ನಡೆದಿದೆ. ವಿರಾರ್ ವಿಜಯ ವಲ್ಲಭ್ ಕೋವಿಡ್-19 ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕ(ಐಸಿಯು)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 13 ಮಂದಿ ಸಾವನ್ನಪ್ಪಿದ್ದು, ಇನ್ನುಳಿದ ರೋಗಿಗಳ ಹತ್ತಿರ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಲು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆದೇಶ ನೀಡಿದ್ದಾರೆ.

ನಾಸಿಕ್ ಜಿಲ್ಲೆಯ ಡಾ.ಝಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಮೊನ್ನೆಯಷ್ಟೇ ಆಕ್ಸಿಜನ್ ಸೋರಿಕೆಯಿಂದಾಗಿ 22 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ದುರಂತ ಸಂಭವಿಸಿದೆ.