ಮಹಿಳಾ ಕ್ರಿಕೆಟರ್ ವೇದಾ ಕೃಷ್ಣಮೂರ್ತಿ ಅವರ ತಾಯಿ ಕೊರೊನಾದಿಂದ ಸಾವು…

336
firstsuddi

ಚಿಕ್ಕಮಗಳೂರು : ಕೊರೊನಾ ಸೋಂಕಿನಿಂದ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರ ತಾಯಿ ಚೆಲುವಾಂಬ ಅವರು ಸಾವನ್ನಪ್ಪಿದ್ದಾರೆ.

ಚೆಲುವಾಂಬ ಅವರಿಗೆ 67 ವರ್ಷ ವಯಸ್ಸಾಗಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ  ಅವರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಕಳೆದ ರಾತ್ರಿ ಚೆಲುವಾಂಬ ಅವರಿಗೆ ಉಸಿರಾಟದ ಸಮಸ್ಯೆ ಎದುರಾದ ಹಿನ್ನಲೆ ಕಡೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ  ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.