ಕುಟುಂಬ ಸದಸ್ಯರಿಗೆ ಕೋವಿಡ್ ಸೋಂಕು ಹಿನ್ನಲೆ; ಐಪಿಎಲ್ ನಿಂದ ದೂರ ಸರಿದ ಆರ್.ಅಶ್ವಿನ್.

307
firstsuddi

ಚೆನ್ನೈ : ಕುಟುಂಬದ ಸದಸ್ಯರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನಲೆ ದೆಹಲಿ ಕ್ಯಾಪಿಟಲ್ಸ್ ತಂಡದ ಪ್ರಮುಖ ಸ್ಪಿನ್ನರ್ ಆರ್.ಅಶ್ವಿನ್ ಅವರು ಐಪಿಎಲ್-2021 ಟೂರ್ನಿಯ ಉಳಿದ ಪಂದ್ಯಗಳಿಂದ ದೂರ ಸರಿಯುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶ್ವಿನ್ ಅವರು, ನನ್ನ ಕುಟುಂಬವು ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದಾರೆ. ಈ ಕಠಿಣ ಸಮಯದಲ್ಲಿ ನಾನು ಅವರನ್ನು ಬೆಂಬಲಿಸಲು ಬಯಸುತ್ತೇನೆ. ಹೀಗಾಗಿ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಟ್ವೀಟ್ ಮಾಡಿದ್ದು, ‘ಈ ಕಷ್ಟದ ಸಮಯದಲ್ಲಿ ನಿಮಗೆ ನಮ್ಮ ಬೆಂಬಲ ಸದಾ ಇರುತ್ತದೆ. ದೇವರು ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ಶಕ್ತಿ ಕೊಡಲಿ. ಆದಷ್ಟು ಬೇಗ ನಿಮ್ಮ ಕುಟುಂಬ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಟ್ವೀಟ್ ಮಾಡಿದೆ.