ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಹೆಚ್ಚಳ ಹಿನ್ನಲೆ ನಾಳೆ ರಾತ್ರಿ 9 ಗಂಟೆಯಿಂದ 14 ದಿನ ಇಡೀ ಕರ್ನಾಟಕ ಸಂಪೂರ್ಣ ಸ್ತಬ್ಧವಾಗಲಿದ್ದು, ಈ ವೇಳೆ ಸಾರಿಗೆ ಬಸ್ ಗಳ ಸಂಚಾರ ಬಂದ್ ಆಗಲಿದೆ. ಜೊತೆಗೆ ಮೆಟ್ರೋ ಸಂಚಾರ ಕೂಡ ಸಂಪೂರ್ಣವಾಗಿ ಬಂದ್ ಆಗಲಿದೆ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದರು.
ಬೆಳಗ್ಗೆ 6 ಗಂಟೆಯಿಂದ 10ರವರೆಗೆ ಮಾತ್ರ ಅಗತ್ಯವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದ್ದು, ಉಳಿದೆಲ್ಲವೂ ಬಂದ್ ಆಗಲಿದೆ. ಜನರ ಓಡಾಟಕ್ಕೆ ಸಾರಿಗೆ ಸಂಚಾರ ಇರುವುದಿಲ್ಲ. ಆದರೆ ಸರಕು-ಸಾಗಣೆ ವಾಹನಗಳ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ಮೇ 10ರವರೆಗೆ ಕೊರೊನಾ ನಿಯಂತ್ರಣಕ್ಕೆ ಬರದಿದ್ರೆ ಲಾಕ್ಡೌನ್ ಮುಂದುವರಿಯಲಿದೆ ಎಂದು ಹೇಳಿದ್ದಾರೆ.










