ಲಾಕ್ ಡೌನ್ ಘೋಷಣೆ ಬೆನ್ನಲ್ಲೇ ಬೆಂಗಳೂರಿಗೆ ಗುಡ್ ಬೈ ಹೇಳಿ ತವರಿಗೆ ಮರಳುತ್ತಿರುವ ಜನ..!

247
firstsuddi

ಬೆಂಗಳೂರು : ಕೊರೊನಾ ಸೋಂಕು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಹೀಗಾಗಿ ನಗರದಿಂದ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಲಗೇಜುಗಳ ಸಮೇತ ಮೆಜೆಸ್ಟಿಕ್ ಕೆಎಸ್ ಆರ್ ಟಿಸಿ ನಿಲ್ದಾಣಗಳತ್ತ ಜನರು ಆಗಮಿಸುತ್ತಿದ್ದು, ಸಿಕ್ಕ ಸಿಕ್ಕ ಖಾಸಗಿ ವಾಹನಗಳನ್ನು ಹಿಡಿದು ಊರಿಗೆ ತೆರಳುವ ಪ್ರಯತ್ನದಲ್ಲಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ನಲ್ಲಿ ಜನ ಸಂದಣಿ ಕಂಡುಬಂದಿದೆ.

ಜನರು ಇಂದು(ಏ.27) ಸಂಜೆಯವರೆಗೂ ತಮ್ಮ ಊರುಗಳಿಗೆ ತೆರಳುವ ಸಾಧ್ಯತೆ ಹೆಚ್ಚಾಗಿದ್ದು, ಕೊರೊನಾ ಕಫ್ರ್ಯೂನಿಂದ ಊರುಗಳಿಗೂ ಹೋಗುತ್ತಿರುವ ಜನರಿಗೆ ಇಂದು 3 ಸಾರಿಗೆ ನಿಗಮಗಳಿಂದ ಬೇಡಿಕೆಗೆ ಅನುಗುಣವಾಗಿ 12 ಸಾವಿರಕ್ಕೂ ಹೆಚ್ಚು ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಇನ್ನೂ ಬೇರೆ ಬೇರೆ ಜಿಲ್ಲೆಗಳಿಗೆ ಮರಳಲು ಜನ ಮೆಜೆಸ್ಟಿಕ್ ಗೆ ಆಗಮಿಸಿದ್ದು, ಜನ ಜಂಗುಳಿ ಕಂಡುಬಂದಿದೆ. ಈ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.