ಕೊರೊನಾ ಸೋಂಕಿಗೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಚಂದ್ರಶೇಖರ್ ನಿಧನ…

170
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ನಿರ್ಮಾಪಕ ಚಂದ್ರಶೇಖರ್(63)ಅವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಕಳೆದ 23 ದಿನಗಳ ಹಿಂದೆ ಚಂದ್ರಶೇಖರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿತ್ತು. ಈ ಹಿನ್ನಲೆ ಮಣಿಪಾಲ್ ಸೆಂಟರ್ ಗೆ ದಾಖಲಾಗಿದ್ದರು. ಬಳಿಕ ಕೋವಿಡ್ ನಿಂದ ಗುಣಮುಖರಾಗಿದ್ದರು. ಆದರೆ ಶ್ವಾಸಕೋಶ ಸಮಸ್ಯೆ ಉಲ್ಬಣಗೊಂಡು ಇಂದು ಕೊನೆಯುಸಿರೆಳೆದಿದ್ದಾರೆ. ಚಂದ್ರಶೇಖರ್ ಅವರು, ನಿಮಿಶಾಂಬ ಪ್ರೊಡಕ್ಷನ್ಸ್ ಬ್ಯಾನರ್ ಅಡಿ, ಅಣ್ಣಯ್ಯ, ಬಿಂದಾಸ್, ಏನೋ ಒಂಥರಾ, ರನ್ನದಂತಹ ಬಿಗ್ ಬಜೆಟ್ ಸಿನಿಮಾ ನಿರ್ಮಿಸಿದ್ದರು.

ಇತ್ತೀಚೆಗಷ್ಟೇ ಮಂಜು ಮಾಂಡವ್ಯ ನಿರ್ದೇಶನದಲ್ಲಿ ಉಪೇಂದ್ರ ಅವರೊಂದಿಗೆ ಸಿನಿಮಾವೊಂದನ್ನು ಅನೌನ್ಸ್ ಮಾಡಿದ್ದರು. ಆದರೆ ವಿಧಿಯ ಆಟವೇ ಬೇರೆ ಆಗಿತ್ತು.