ಚಿಕ್ಕಮಗಳೂರು : ಇಂದು ಹಸೆಮಣೆ ಏರಬೇಕಿದ್ದ ವರ ಕೊರೊನಾ ಸೋಂಕಿಗೆ ಬಲಿ…

314
firstsuddi

ಚಿಕ್ಕಮಗಳೂರು : ಇಂದು ಹಸೆಮಣೆ ಏರಬೇಕಾಗಿದ್ದ ಯುವಕ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊಪ್ಪ ತಾಲ್ಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ. ಪೃಥ್ವಿರಾಜ್(32) ಕೊರೊನಾಗೆ ಬಲಿಯಾದ ಯುವಕ.

ಮದುವೆ ಹಿನ್ನೆಲೆ ಹತ್ತು ದಿನಗಳ ಹಿಂದೆ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಆಗಮಿಸಿದ್ದರು. ಆದರೆ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಪೃಥ್ವಿರಾಜ್ ಅವರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಇಂದು ಚಿಕಿತ್ಸೆ ಫಲಿಸದೇ ಪೃಥ್ವಿರಾಜ್ ಕೊನೆಯುಸಿರೆಳೆದಿದ್ದಾರೆ.