ದೇಶದಲ್ಲಿ 4,01,993 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆ…

111
firstsuddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,993 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,523 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,11,853ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,91,64,969 ಮಂದಿ ಸೋಂಕಿತರ ಪೈಕಿ ಈವರೆಗೆ 1,56,84,406 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.