ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ; 16 ಮಂದಿ ಸಾವು…

114
firstsuddi

ಗುಜರಾತ್ : ಬೆಂಕಿ ಅವಘಡ ಸಂಭವಿಸಿ 16 ಮಂದಿ ಸಾವನ್ನಪ್ಪಿರುವ ಘಟನೆ ಭರೂಚ್ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ. ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

 ರೋಗಿಗಳನ್ನು ಸಮೀಪದ ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ. ಮಾಡಲಾಗಿದೆ. ಆದರೆ ಬೆಂಕಿ ಅನಾಹುತಕ್ಕೆ ಮೂಲ ಕಾರಣ ತಿಳಿದುಬಂದಿಲ್ಲ ಎಂದು ಎಸ್ ಪಿ ರಾಜೇಂದ್ರ ಸಿನ್ಹ್ ಚೂಡಾಸಮ ಹೇಳಿದ್ದಾರೆ.

ಇನ್ನೂ ಕೋವಿಡ್ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ವಿಜಯ್ ರುಪಾನಿಯವರು, ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.