ಕೊರೊನಾ ಭೀತಿ ; ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತ್ರಕರ್ತ…

158
firstsuddi

ದಾವಣಗೆರೆ : ಕೋವಿಡ್ ಸೋಕಿನ ಅಬ್ಬರಕ್ಕೆ ಭಯಗೊಂಡು ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್(46)ಆತ್ಮಹತ್ಯೆ ಮಾಡಿಕೊಂಡ ಪತ್ರಕರ್ತ. ವಿಜಯ ಕರ್ನಾಟಕ ಪತ್ರಿಕೆಗೆ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ ಅವರಿಗೆ ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡಿದೆ. ಇನ್ನೂ ಟೆಸ್ಟ್ ಮಾಡಿಸಿದರೆ ಪಾಸಿಟಿವ್ ಬಂದರೆ ಏನು ಮಾಡುವುದು ಎಂದು ಭಯಗೊಂಡು ಅಮರಾವತಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಈ ಪ್ರಕರಣ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.