ಮಾಸ್ಕ್, ಸಾಮಾಜಿಕ ಅಂತರ ಕಾಪಾಡದಿದ್ದರೆ ಮಾರುಕಟ್ಟೆ ಬಂದ್ : ರೇಣುಕಾಚಾರ್ಯ ಎಚ್ಚರಿಕೆ…

94
firstsuddi

ದಾವಣಗೆರೆ : ಬೆಳ್ಳಂಬೆಳಗ್ಗೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಎಪಿಎಂಸಿಗೆ ಭೇಟಿ ನೀಡಿದ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಮಾಸ್ಕ್ ಧರಿಸುವಿಕೆ ಹಾಗೂ ಸಾಮಾಜಿಕ ಅಂತರದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. ಅಲ್ಲದೇ ಮಾಸ್ಕ್ ಹಾಕಿಕೊಳ್ಳದವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಎಲ್ಲರೂ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲಿಸಬೇಕು. ಇನ್ನು ಜನರು ಮಾಸ್ಕ್ ಹಾಕದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದರೆ ಮಾರುಕಟ್ಟೆ ಬಂದ್ ಮಾಡಿಸುತ್ತೇನೆ ಎಂದು ತರಕಾರಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು. ವರ್ತಕರಿಗೆ ಸುರಕ್ಷಿತವಾಗಿ ವ್ಯಾಪಾರ ಮಾಡುವಂತೆ ಸೂಚಿಸಿದ್ದಾರೆ.