ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರು ಕೊರೊನಾದಿಂದ ನಿಧನ…

220
firstsuddi

ಮೈಸೂರು : ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ(63) ಅವರು ಕೊರೊನಾದಿಂದ ಮೃತಪಟ್ಡಿದ್ದಾರೆ.

ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಚುಂಚನಕಟ್ಟೆ ಬಳಿ ಇರುವ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಅವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ಕಳೆದ ಎರಡು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್ ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.