ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ; ಡಿಸಿ ರೋಹಿಣಿ ಸಿಂಧೂರಿಗೆ ಕ್ಲೀನ್ ಚಿಟ್…

145
firstsuddi

ಮೈಸೂರು : ಚಾಮರಾಜ ನಗರ ಆಮ್ಲಜನಕ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚೀಟ್ ನೀಡಲಾಗಿದೆ.

ಹೌದು. ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲ ಸಮಿತಿಯು ಹೈಕೋರ್ಟ್ ಗೆ ವರದಿ ನೀಡಿದೆ. ದುರಂತದಲ್ಲಿ ಜಿಲ್ಲಾಧಿಕಾರಿಯವರದ್ದು ಯಾವುದೇ ತಪ್ಪಿಲ್ಲ. ರೋಹಿಣಿ ಸಿಂಧೂರಿ ಅವರು ಆಮ್ಲಜನಕ ಪೂರೈಕೆಗೆ ತಡೆಯೊಡಿದ್ದಾರೆ ಎಂಬುದಕ್ಲೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಚಾಮರಾಜನಗರಕ್ಕೆ ಆಮ್ಲಜನಕ ಸಾಗಿಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆ ಮಾಡಿದ್ದರು ಎಂಬ ಚಾಮರಾಜನಗರ ಜಿಲ್ಲಾಧಿಕಾರಿ ಆರೋಪಕ್ಕೆ ಯಾವುದೇ ಸಾಕ್ಷಿ, ದಾಖಲೆಗಳಿಲ್ಲ. ಪ್ರಕರಣಕ್ಕೆ ಚಾಮರಾಜನಗರ ಜಿಲ್ಲಾಧಿಕಾರಿ ಹೊಣೆಯಾಗಿದ್ದು, ಆಕ್ಸಿಜನ್ ವ್ಯವಸ್ಥೆ ಮಾಡಿಕೊಳ್ಳುವಲ್ಲಿ ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ವಿಫಲವಾಗಿದೆ. ಜಿಲ್ಲಾಡಳಿತ, ಜಿಲ್ಲಾಸ್ಪತ್ರೆ ಎಚ್ಚರವಾಗಿದ್ದರೆ ಈ ದುರಂತ ಸಂಭವಿಸುತ್ತಿರಲಿಲ್ಲ. ದುರಂತಕ್ಕೆ ರೋಹಿಣಿ ಸಿಂಧೂರಿ ಅವರನ್ನು ಗುರಿ ಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯ ಸಮಿತಿ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚಿಟ್ ದೊರೆತಿದೆ.