ಬೆಂಗಳೂರು : ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಪಡಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಈಗಾಗಲೇ ಮುಂದೂಡಲಾಗಿರುವ ಎಸ್ಎಸ್ಎಲ್ ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಪರೀಕ್ಷೆ ರದ್ದು ಮಾಡುವ ಬಗ್ಗೆ ಕೆಲವೆಡೆ ಊಹಾಪೋಹವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.










