ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ ನಟ ರಜನಿಕಾಂತ್.

113
firstsuddi

ಚೆನ್ನೈ : ಕೋವಿಡ್ ವಿರುದ್ಧದ ಹೋರಾಟಕ್ಕಾಗಿ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ತಮಿಳುನಾಡು ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ಇಂದು ಸಚಿವಾಲಯದಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದ ತಲೈವಾ 50 ಲಕ್ಷ ರೂಪಾಯಿ ದೇಣಿಗೆಯ ಚೆಕ್ ನ್ನು ಹಸ್ತಾಂತರಿಸಿದರು.

ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹೇರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.