ದೇಶದಲ್ಲಿ 2,59,551 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆ

90
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,59,551 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4,209 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 2,91,331ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,60,31,991 ಮಂದಿ ಸೋಂಕಿತರ ಪೈಕಿ ಈವರೆಗೆ 2,27,12,735 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.