ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆ ನಿರ್ಧಾರ : ಸಿಎಂ ಯಡಿಯೂರಪ್ಪ.

156
firstsuddi

ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪನವರು ಇಂದು ಸಂಜೆ ಸಚಿವರ ಸಭೆ ಕರೆದಿದ್ದೇನೆ. ಲಾಕ್ ಡೌನ್ ವಿಸ್ತರಣೆ ಕುರಿತು ಸಂಜೆ ಸಚಿವರ ಜೊತೆ ಕುಳಿತು ಚರ್ಚೆ ಮಾಡುತ್ತೇವೆ. ನಂತರ ವಿಸ್ತರಣೆ ಕುರಿತು ನಾಳೆ ನಿರ್ಧಾರ ತಿಳಿಸಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗಿದ್ದು, ಬಹಳ ಆತಂಕ ಇದೆ. ಪ್ರಧಾನಿ ನರೇಂದ್ರ ಮೋದಿಯವರು ಈಗಾಗಲೇ ವಿವಿಧ ಜಿಲ್ಲೆಗಳ ಡಿಸಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದು, ನಿಮ್ಮ ನಿಮ್ಮ ಜಿಲ್ಲೆಗಳ ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿಯೂ ನಾವು ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಹೇಳಿದರು.