ರಮೇಶ್ ಜಾರಕಿಹೊಳಿ ಸಿಡಿ ಕೇಸ್ ; ಸಂತ್ರಸ್ತೆ ಯುವತಿಯ ಪೋಷಕರಿಗೆ ನೋಟಿಸ್ ನೀಡಿದ ಸಿಸಿಬಿ ಪೊಲೀಸರು!

174
Firstsuddi

ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಸಂತ್ರಸ್ತೆ ಯುವತಿಯ ಪೋಷಕರಿಗೆ ನೋಟಿಸ್ ನೀಡಿದ್ದಾರೆ. ನಮ್ಮ ಮಗಳನ್ನು ಕಿಡ್ನ್ಯಾಪ್ ಮಾಡಿದ್ದಾರೆಂದು ಸಂತ್ರಸ್ತೆ ಕುಟುಂಬಸ್ಥರು ಬೆಳಗಾವಿ ಎಪಿಎಂಸಿ ಠಾಣೆಗೆ ದೂರು ನೀಡಿದ್ದರು. ಈ ಹಿನ್ನಲೆ ವಿಚಾರಣೆಗೆ ಹಾಜರಾಗುವಂತೆ ಮೇ.21 ರಂದು ಯುವತಿ ಕುಟುಂಬಸ್ಥರಿಗೆ ನೋಟಿಸ್ ನೀಡಲಾಗಿದೆ. ಸಿಸಿಬಿ ಅಧಿಕಾರಿ ವಿಜಯ್ ಕುಮಾರ್ ಅವರಿಂದ ನೋಟಿಸ್ ನೀಡಿದ್ದು, ಲಾಕ್ ಡೌನ್ ಮುಗಿದ ಬಳಿಕ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನೂ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿಯಲ್ಲಿರುವುದು ನಾನಲ್ಲ, ಯುವತಿ ನನಗೆ ಗೊತ್ತೆ ಇಲ್ಲ ಎಂದು ಹೇಳುತ್ತಿದ್ದ ರಮೇಶ್ ಜಾರಕಿ ಹೊಳಿ ಅವರು ಇದೀಗ ಉಲ್ಟಾ ಹೊಡೆದಂತೆ ಕಾಣಿಸುತ್ತದೆ. ಸಿಡಿಯಲ್ಲಿರೋದು ನಾನೇ, ಆ ಯುವತಿ ನನಗೆ ಗೊತ್ತು ಎಂದು ಮಾಜಿ ಸಚಿವ ಸಿಸಿಬಿ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.