ಸಿಬಿಐನ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ ಅವರು ನೇಮಕ…

115
firstsuddi

ನವದೆಹಲಿ : ಕೇಂದ್ರೀಯ ತನಿಖಾ ದಳದ (ಸಿಬಿಐ) ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರು ನೇಮಕಗೊಂಡಿದ್ದಾರೆ.

ಕ್ಯಾಬಿನೆಟ್ ನೇಮಕಾತಿ ಸಮಿತಿ ನಿನ್ನೆ ಆದೇಶ ಹೊರಡಿಸಿದ್ದು, ಸುಬೋಧ್ ಕುಮಾರ್ ಜೈಸ್ವಾಲ್ ಅವರ ಅಧಿಕಾರವಧಿ ಎರಡು ವರ್ಷಗಳವರೆಗೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ, ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ, ಲೋಕಸಭೆ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಹಾಗೂ ಸುಬೋಧ್ ಕುಮಾರ್ ಜೈಸ್ವಾಲ್ ಈ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್ ಅವರ ಹೆಸರನ್ನು ಸಿಬಿಐ ನಿರ್ದೇಶಕ ಹುದ್ದೆಗೆ ಅಂತಿಮಗೊಳಿಸಿದೆ.

ಸುಬೋಧ್ ಕುಮಾರ್ ಜೈಸ್ವಾಲ್ ಅವರು 1985ರ ಮಹಾರಾಷ್ಟ್ರ ಕೇಡರ್ ನ ಐಪಿಎಸ್ ಅಧಿಕಾರಿಯಾಗಿದ್ದು, ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಾನಿರ್ದೇಶಕರಾಗಿದ್ದಾರೆ. ಅಲ್ಲದೇ ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ ನಲ್ಲೂ ಕೂಡ ಕಾರ್ಯನಿರ್ವಹಿಸಿದ್ದಾರೆ.