ಬಿಜೆಪಿ ಪಾಲಿಸಿಕೊಂಡು ಬಂದ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ : ಹೆಚ್ ಡಿಕೆ.

74
firstsuddi

ಬೆಂಗಳೂರು : ಸಿಎಂ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಿಂದಾಲ್ ಕಂಪನಿಗೆ ಭೂಮಿ ನೀಡುವುದನ್ನು ಸದ್ಯಕ್ಕೆ ಕೈ ಬಿಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ. ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳೀದ್ದಾರೆ.

ಜಿಂದಾಲ್ ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯ ಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂತಾಗಿದೆ ಎಂದು ಟೀಕಿಸಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದುಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.