ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,73,790 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,77,29,247ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3,617 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,22,512 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,77,29,247 ಮಂದಿ ಸೋಂಕಿತರ ಪೈಕಿ ಈವರೆಗೆ 2,51,78,011 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










