ವಸತಿ ಕಟ್ಟಡದ ಮೇಲ್ಛಾವಣಿ ಕುಸಿತ ; ಆರು ಮಂದಿ ದಾರುಣ ಸಾವು…

92
firstsuddi

ಮುಂಬೈ : ವಸತಿ ಕಟ್ಟಡದ ಮೇಲ್ಛಾವಣಿ ಕುಸಿತಗೊಂಡ ಪರಿಣಾಮ ಆರುಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಥಾಣಾ ಮಹಾನಗರ ಪಾಲಿಕೆಯ ಉಲ್ಲಾಸ್ ನಗರದಲ್ಲಿ ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಅಧಿಕಾರಿಗಳು, ರಕ್ಷಣಾ ಪಡೆ ಬಿಡುಬಿಟ್ಟಿದ್ದು, ರಕ್ಷಣಾ ಕಾರ್ಯಚರಣೆ ನಡೆಸುತ್ತಿವೆ.

ಉಲ್ಹಾಸ್ ನಗರದ ಮಹಾನಗರ ಪಾಲಿಕೆಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ನೆಹರೂ ಚೌಕ್ ಪ್ರದೇಶದ ಸಾಯಿ ಸಿದ್ಧಿ ಕಟ್ಟಡದ ಐದನೇ ಮಹಡಿಯ ಮೇಲ್ಛಾವಣಿ ಕುಸಿದ ಪರಿಣಾಮ ದುರಂತ ಸಂಭವಿಸಿದೆ. ಕಟ್ಟಡದ ಅವಶೇಷಗಳಿಂದ ಆರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಮತ್ತಷ್ಟು ಮಂದಿ ಸಿಲುಕಿರುವುದಾಗಿ ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.