ಶಿವಮೊಗ್ಗ : ಮಹಾಮಾರಿ ಕೊರೊನಾಗೆ ನವವಿವಾಹಿತೆಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮದುವೆಯಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಪೂಜಾ (24) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯ ನಿದಿಗೆಯ ಪೂಜಾ ಅವರು ಹರಿಗೆಯ ಮಹೇಶ್ ಎಂಬವರನ್ನು ಸೋಮವಾರ ವರಿಸಿದ್ದರು. ಮದುವೆಯಾದ ಎರಡೇ ದಿನಕ್ಕೆ ಪೂಜಾಗೆ ಮೈ-ಕೈ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರು ಮಲವಗೊಪ್ಪದ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ನಿನ್ನೆ ತುಂಬಾ ಸುಸ್ತಾಗುತ್ತಿದೆ ಎಂದು ಗ್ಲುಕೋಸ್ ಹಾಕಿಸಿದ್ದಾರೆ. ಈ ವೇಳೆ ಪೂಜಾ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲೇ ಪೂಜಾ ಅವರು ಪ್ರಾಣ ಬಿಟ್ಟಿದ್ದಾರೆ.
ಇದೀಗ ಮದುವೆಯ ಸಂಭ್ರಮವಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.










