ಬೆಂಗಳೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆ ಎರಡು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.
ಜ್ವರ ಕಾಣಿಸಿಕೊಂಡ ಹಿನ್ನಲೆ ವೈದ್ಯರ ಸಲಹೆ ಮೇರೆಗೆ ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ. ಹೀಗಾಗಿ ಇಂದು ಮತ್ತು ನಾಳೆ ನಿಗದಿಯಾಗಿದ್ದ ಅವರ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.
ಸಿದ್ದರಾಮಯ್ಯನವರು ಕೋವಿಡ್ ತಪಾಸಣೆಗೆ ಒಳಗಾಗಿದ್ದು, ಪರೀಕ್ಷಾ ವರದಿ ನೆಗೆಟಿವ್ ಬಂದಿದೆ.










