ನಡೆದುಕೊಂಡು ಹೋಗುತ್ತಿರುವಾಗಲೇ ಜನರು ಬಿದ್ದು ಸಾಯ್ತಾರೆ : ಕೋಡಿಮಠದ ಶ್ರೀ ಭವಿಷ್ಯ..!

136
firstsuddi

ಹಾಸನ : ನಡೆದುಕೊಂಡು ಹೋಗುತ್ತಿರುವಾಗಲೇ ಜನರು ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಕೋಡಿಮಠ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ಬೆಚ್ಚಿಬೀಳಿಸುವ ಭವಿಷ್ಯವೊಂದನ್ನು ನುಡಿದಿದ್ದಾರೆ.

ಜೂನ್ 20ರ ಬಳಿಕ ಕೊರೊನಾ ಅಲೆ ಕಡಿಮೆಯಾಗಲಿದೆ. ಆದರೆ ಕೊರೊನಾ ದೂರವಾಗಲು ಸುಮಾರು 10 ವರ್ಷಗಳೇ ಬೇಕು. ಕೊರೊನಾಗಿಂತಲೂ ಭಯಾನಕ ರೋಗ ಮುಂದೆ ಬರುತ್ತದೆ. ಈ ವರ್ಷ “ಕುಂಭದಿ ಗುರು ಬರಲು ತುಂಬುವವು ಕೆರೆ ಕಟ್ಟೆ, ಶಂಭುವಿನ ಪದಸಾಕ್ಷಿ ಡಂಬವೆನ್ನೆಲು ಬೇಡಿದೆನಾ ಎಂದರೆ, ಪ್ರಳಯದ ಮಳೆ ಆಗಲಿದೆ. ಭೂಮಿಯಲ್ಲಿ ಈಗಾಗಲೇ ಕೋಟ್ಯಂತರ ಜನರ ಶವವನ್ನು ಹೂತಿದ್ದಾರೆ. ಅದೇ ವಿಷವಾಗಿ ಭೂಮಿಯಿಂದ ಹೊರಬರಲಿದೆ. ಜನರು ಹೋಗ ಹೋಗುತ್ತಲೇ ಬಿದ್ದು ಸಾಯುವ ಕಾಯಿಲೆಯೊಂದು ಮುಂದೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಗತ್ತಿನಲ್ಲಿ ಅಪಾಯಕಾರಿ ಘಟನೆಯೊಂದು ನಡೆಯಲಿದೆ. ಇದು ರಾಷ್ಟ್ರಕ್ಕೆ ಅಪಾಯವಾಗಲಿದೆ. ದೇಶದಲ್ಲಿ ಪ್ರಳಯವಾಗುವ ಸಾಧ್ಯತೆ ಇದೆ. ಆದರೆ ಕರ್ನಾಟಕಕ್ಕೆ ಅಷ್ಟು ತೊಂದರೆಗಳು ಆಗವುದಿಲ್ಲ. ಇದರ ಜೊತೆಗೆ ರಾಜಕೀಯ ಭೀತಿ ಎದುರಾಗಲಿದೆ. ಅಲ್ಲದೆ ಜಗತ್ತಿನಲ್ಲಿ ದೊಡ್ಡ ದೊಡ್ಡ ತಲೆಗಳು ಉರುಳಲಿವೆ. ಮುಂದಿನ ದಿನಗಳಲ್ಲಿ ಸಾಮೂಹಿಕ ಸಾವುಗಳು ಸಂಭವಿಸಲಿವೆ. ಸತ್ತು ಹೂಳಲ್ಪಟ್ಟವರು ಕೂಡ ಮಾತನಾಡುತ್ತಾರೆ. ಅದನ್ನು ನೀವು ನೋಡಬಹುದು, ಆದರೆ ನೀವು ಅವರ ಜೊತೆ ಮಾತನಾಡಲು ಸಾಧ್ಯವಿಲ್ಲ.  ಮಿಂಚಿನಿಂದ ದುರ್ಯೋಗವಿದೆ ಎಂದು ಅವರು ತಿಳಿಸಿದ್ದಾರೆ.