ಬೆಂಗಳೂರು : ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು, ರಫ್ತು ಮಾಡುವ ಮತ್ತು ರಫ್ತು ಅವಲಂಬಿತ ಉದ್ಯಮಗಳಿಗೆ ನಾಳೆಯಿಂದ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಎರಡನೇ ಅಲೆ ನಿಯಂತ್ರಣಕ್ಕಾಗಿ ಲಾಕ್ ಡೌನ್ ಜಾರಿಗೊಳಿಸಿದ್ದು, ಜೂನ್ 7ರವರೆಗೆ ಇದು ಜಾರಿಯಲ್ಲಿದೆ. ಲಾಕ್ ಡೌನ್ ಜಾರಿಯಲ್ಲಿದ್ದರೂ ಹಳ್ಳಿಗಳಲ್ಲಿ ಇನ್ನೂ ಕೊರೊನಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಹಾಗಾಗಿ ಇದನ್ನು ಸರಿದೂಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಇಂದು ತಜ್ಞರ ಸಮಿತಿ ಸಭೆ ಮತ್ತು ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಪ್ರಮುಖವಾಗಿ ಕೆಲ ವಲಯಕ್ಕೆ ಲಾಕ್ ಡೌನ್ ಸಡಿಲಿಕೆ ಬಗ್ಗೆ ಇಂದು ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ವಿಸ್ತರಣೆ ಬಗ್ಗೆ ಸಿಎಂ ಯಡಿಯೂರಪ್ಪನವರು ಸುಳಿವು ನೀಡಿದ್ದಾರೆ.










