ಕೆಎಸ್ ಆರ್ ಟಿಸಿ ಸಂಸ್ಥೆಗೆ ‘ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ’ ಎಂದು ನಾಮಕರಣ ಮಾಡಿ : ಸರ್ಕಾರಕ್ಕೆ ಸುಮಲತಾ ಅಂಬರೀಶ್ ಮನವಿ…

179
firstsuddi

ಬೆಂಗಳೂರು : ಕೆಎಸ್ ಆರ್ ಟಿಸಿ ಟ್ರೇಡ್ ಮಾರ್ಕ್ ಹಾಗೂ ಲೋಗೋ ಕೇರಳ ರಾಜ್ಯದ ಪಾಲಾಗಿರುವ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಹೆಸರಿಡಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರ ಬರೆದಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಟ್ರೇಡ್ ಮಾರ್ಕ್ ಕೇರಳದ ಪಾಲಾಗಿರುವ ಹಿನ್ನಲೆ ಕೆಎಸ್ ಆರ್ ಟಿಸಿ ಸಂಸ್ಥೆಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡುವ ಮೂಲಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.