ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,00,636 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,89,09,975ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2,427 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,49,186 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,89,09,975 ಮಂದಿ ಸೋಂಕಿತರ ಪೈಕಿ ಈವರೆಗೆ 2,71,59,180 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.










