ನವದೆಹಲಿ : ಇಂದು ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ, ಇಂದು ಸಂಜೆ ಪ್ರಧಾನಿ ಮೋದಿಯವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದೆ.
ಕಳೆದ ವರ್ಷ ಕೋವಿಡ್-19 ದೇಶಕ್ಕೆ ಹರಡಿದ ನಂತರ ಹಲವು ಬಾರಿ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿಯುವರು ಇಂದು ಯಾವ ವಿಷಯದ ಕುರಿತು ಚರ್ಚೆ ಮಾಡಲಿದ್ದಾರೆ ಎಂಬುದು ತಿಳಿದುಬಂದಿಲ್ಲ. ಆದರೆ ಕೋವಿಡ್ ಪರಿಸ್ಥಿತಿ ಕುರಿತು ಚರ್ಚಿಸುವ ನಿರೀಕ್ಷೆ ಇದೆ.










