ಈ ಬಾರಿ ಸಿಇಟಿಗೆ ದ್ವಿತೀಯ ಪಿಯುಸಿ ಅಂಕ ಪರಿಗಣಿಸಲ್ಲ : ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ.

105
firstsuddi

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸಿಇಟಿ ಪರೀಕ್ಷೆ ಬಗ್ಗೆ ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರು ಈ ಬಾರಿ ಸಿಇಟಿಗೆ ದ್ವಿತೀಯ ಪಿಯುಸಿ ಅಂಕ ಪರಿಗಣಿಸಲ್ಲ. ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳು ಜಾಸ್ತಿಯಾದರೆ ಮಾತ್ರ ದಿನಾಂಕವನ್ನು ಮುಂದೂಡಲಾಗುವುದು. ಜೂನ್ 15ರಿಂದ ಸಿಇಟಿಗೆ ನೋಂದಣಿ ಆರಂಭವಾಗುತ್ತದೆ. ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಎಲ್ಲ ಕೋರ್ಸ್‍ಗಳಿಗೆ ಸಿಇಟಿ ಅಂಕ ಪರಿಗಣಿಸಲಾಗುವುದು. ದ್ವಿತೀಯ ಪಿಯುಸಿಯಲ್ಲಿ ಶೇ.100 ರಷ್ಟು ವಿದ್ಯಾರ್ಥಿಗಳು ಪಾಸ್ ಆಗುತ್ತಾರೆ. ಜೊತೆಗೆ ಸಿಇಟಿಗೆ ನೋಂದಣಿ ನೋಡಿಕೊಂಡು ಎಷ್ಟು ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಸಬೇಕೆಂದು ನಿರ್ಧರಿಸುತ್ತೇವೆ ಎಂದು ತಿಳಿಸಿದ್ದಾರೆ.